ಅಕ್ರಮವಾಗಿ ಸಾಗಿಸುತ್ತಿದ್ದ 49 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಧಿಸುತ್ತಿದ್ದ 49 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ಪೋಸ್ಟ್ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮದ್ಯರಾತ್ರಿ ವಾಹನ ತಪಾಸಣೆ ನಡೆಸುವ ವೇಳೆ ಕಂಟೇನರ್ ಚಾಲಕ ಅರಣ್ಯದಲ್ಲಿ ಪರಾರಿಯಾಗಿದ್ದಾನೆ. ಸಂಶಯಗೊಂಡು ವಾಹನ ಪರಿಶೀಲಿಸಿದಾಗ ಕಂಟೇನರ್ ಒಳಗೆ ಇನ್ನೊಂದು ಕಂಪಾರ್ಟ್ಮೆಂಟ್ ಇರುವುದು ಪತ್ತೆಯಾಗಿದ್ದು, ಅದರಲ್ಲಿ ಮದ್ಯದ ಬಾಟಲಿಗಳನ್ನು ಇಟ್ಟು ಸಾಗಾಣೆ ಮಾಡಲಾಗುತ್ತಿತ್ತು.

49 ಲಕ್ಷ ರೂ. ಮೌಲ್ಯದ 3060 ಮದ್ಯದ ಬಾಟಲಿ, 35 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಮಯದಲ್ಲಿ ಹಂಚಿಕೆ ಮಾಡಲು ಮದ್ತ ಸಾಗಿಸಲಾಗುತ್ತಿತ್ತೆ ಎನ್ನುವುದರ ಕುರಿತಾಗಿ ತನಿಖೆ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read