ಗಮನಿಸಿ: ನ. 20ರಂದು ಸಿಗಲ್ಲ ಮದ್ಯ: ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಗೆ ನಿರ್ಧಾರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ನವೆಂಬರ್ 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಲು ರಾಜ್ಯ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ನಿರ್ಧಾರ ಕೈಗೊಂಡಿದೆ.

ವರ್ಗಾವಣೆ, ಪ್ರಮೋಷನ್ ಗೆ ಲಕ್ಷಾಂತರ ರೂಪಾಯಿ ಲಂಚ ಕೊಡಬೇಕು ಎಂದು ಹೇಳಿ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಸನ್ನದುದಾರರಿಂದ ಮನಸ್ಸೋ ಇಚ್ಛೆ ಲಂಚ ಪಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಮದ್ಯ ಮಾರಾಟಗಾರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿ ಕೈಗೊಂಡ ನಿರ್ಣಯದಂತೆ ನವೆಂಬರ್ 20ರಂದು ಮದ್ಯ ಮಾರಾಟ ಬಂದ್ ಮಾಡಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಅಬಕಾರಿ ಅಧಿಕಾರಿಗಳು ಲಂಚಕ್ಕಾಗಿ ಪೀಡಿಸುತ್ತಿರುವುದರಿಂದ ನಕಲಿ, ಅಂತರ ರಾಜ್ಯ ಮದ್ಯ ಮಾರಾಟ ಹೆಚ್ಚಾಗಿದೆ. ಅಬಕಾರಿ ಆದಾಯ ಕುಂಠಿತವಾಗಿದೆ. ಅಬಕಾರಿ ಇಲಾಖೆ ಅನುದಾನ ಇಲ್ಲದೆ ಇರುವ ಇಲಾಖೆ ಆಗಿರುವುದರಿಂದ ಇದನ್ನು ಆರ್ಥಿಕ ಇಲಾಖೆ ಜವಾಬ್ದಾರಿ ಹೊಂದಿರುವ ಸಚಿವರಿಗೆ ವಹಿಸಬೇಕು ಎಂದು ಆಗ್ರಹಿಸಿ ಮದ್ಯ ಮಾರಾಟ ಬಂದ್ ಗೆ ಕರೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read