HomeLatest NewsBREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಆಂಧ್ರ ಮಾಜಿ ಶಾಸಕ ಅರೆಸ್ಟ್

BREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಆಂಧ್ರ ಮಾಜಿ ಶಾಸಕ ಅರೆಸ್ಟ್

ಬೆಂಗಳೂರು: ಆಂಧ್ರಪ್ರದೇಶದ YSRCP ಮಾಜಿ ಶಾಸಕ ಚೆವಿ ರೆಡ್ಡಿ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಲಾಗಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆವಿ ರೆಡ್ಡಿ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಲಾಗಿದೆ.

ಜಗನ್ ಅವಧಿಯಲ್ಲಿ ಚಂದ್ರಗಿರಿ ಶಾಸಕರಾಗಿದ್ದ ಚೆವಿ ರೆಡ್ಡಿ ಭಾಸ್ಕರ್ ರೆಡ್ಡಿ ವಿದೇಶಕ್ಕೆ ಅಕ್ರಮವಾಗಿ ತೆರಳಲು ಯತ್ನಿಸುತ್ತಿದ್ದರು. ಆಂಧ್ರಪ್ರದೇಶದ ಅಬಕಾರಿ ಹಗರಣದ ಆರೋಪಿ ಆಗಿರುವ ಚೆವಿ ರೆಡ್ಡಿ ಗೆ ಲುಕೌಟ್ ನೋಟಿಸ್ ನೀಡಿದ್ದ ಕಾರಣ ಅವರನ್ನು ಬಂಧಿಸಲಾಗಿದೆ.

ಮಧ್ಯರಾತ್ರಿ ಆಂಧ್ರಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆಂಧ್ರಪ್ರದೇಶದ ಎಎಸ್ಪಿ ಮಹೇಶ್ ಅವರಿಗೆ ಮಾಜಿ ಶಾಸಕ ಚೆವಿ ರೆಡ್ಡಿ ಅವರನ್ನು ಹಸ್ತಾಂತರಿಸಲಾಗಿದ್ದು, ಆಂಧ್ರಪ್ರದೇಶ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಂಧ್ರಪ್ರದೇಶದಲ್ಲಿ ಮದ್ಯ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಚಂದ್ರಗಿರಿಯ ಮಾಜಿ ಶಾಸಕ ಚೆವಿ ರೆಡ್ಡಿ ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು.

ಲುಕೌಟ್ ನೋಟಿಸ್ ಹಿನ್ನೆಲೆಯಲ್ಲಿ ಕೊಲಂಬೊಗೆ ವಿಮಾನ ಹತ್ತಲು ಸಿದ್ಧವಾಗಿದ್ದ ವೈಎಸ್‌ಆರ್‌ಸಿಪಿ ನಾಯಕನನ್ನು ವಿಮಾನ ಹತ್ತದಂತೆ ತಡೆಯಲಾಯಿತು.

ವಿಮಾನ ನಿಲ್ದಾಣದ ಅಧಿಕಾರಿಗಳು ಎಸ್‌ಐಟಿಗೆ ಅವರ ಬಂಧನದ ಬಗ್ಗೆ ಮಾಹಿತಿ ನೀಡಿದ ನಂತರ, ವಿಜಯವಾಡದ ತಂಡವು ಚೆವಿರೆಡ್ಡಿಯನ್ನು ವಶಕ್ಕೆ ತೆಗೆದುಕೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular