HomeKarnatakaರಾಜ್ಯಮಟ್ಟದ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ರಾಜ್ಯಮಟ್ಟದ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು: 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬ್‍ಸೈಟ್ www.dpl.karnataka.gov.in ನಲ್ಲಿ 2026 ನೇ ಮಾರ್ಚ್ 02 ರಂದು ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಅವಕಾಶ :

ಆಯ್ಕೆಯಾದ ಪುಸ್ತಕಗಳ ಪಟ್ಟಿಯಲ್ಲಿರುವ ಲೇಖಕರು, ಲೇಖಕ – ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಪುಸ್ತಕಗಳಿಗೆ ಸಂಬಂಧಿಸಿದ ಪುಸ್ತಕದ ಶೀರ್ಷಿಕೆ, ಲೇಖಕರ / ಪ್ರಕಾಶಕರ ಹೆಸರು, ಮುಖ ಬೆಲೆ (ನಿಗದಿತ ಬೆಲೆಯಲ್ಲಿ ವ್ಯತ್ಯಾಸವಿದ್ದಲ್ಲಿ), ಪುಸ್ತಕದ ಅಳತೆ ಮತ್ತು ಪುಟಗಳ ಸಂಖ್ಯೆ ಅಥವಾ ಇತರ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ತಮ್ಮ ಆಕ್ಷೇಪಣೆ ಅಥವಾ ತಿದ್ದುಪಡಿಗಳನ್ನು ಅಧಿಕೃತ ಮಾಹಿತಿ / ದಾಖಲೆಗಳೊಂದಿಗೆ 2026 ನೇ ಮಾರ್ಚ್ 16ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಗದಿತ ಅವಧಿಯ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಏಕಪಕ್ಷೀಯವಾಗಿ ನಿರ್ಣಯವನ್ನು ಕೈಗೊಳ್ಳಲಾಗುವುದು  ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ಬಸವರಾಜೇಂದ್ರ ಹೆಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular