BIG NEWS : ರಾಜ್ಯ ಸರ್ಕಾರದಿಂದ ‘ಮುಖ್ಯಮಂತ್ರಿ’ ಪದಕಕ್ಕೆ ಆಯ್ಕೆಯಾದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಪಟ್ಟಿ ಬಿಡುಗಡೆ.!

ಬೆಂಗಳೂರು : ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸಾಧನೆಗೈದ ಅಧಿಕಾರಿ/ಸಿಬ್ಬಂದಿಗಳಿಗೆ 2024ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡುವ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ಅರಣ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಸರ್ಕಾರದ ಆದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು ಇತ್ಯಾದಿ ಕೆಲಸಕಾರ್ಯಗಳ ಮೂಲಕ ಗಣನೀಯ ಸಾಧನೆ ಮಾಡಿದ ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಿಗೆ ಮಾನ್ಯ ಮುಖ್ಯಮಂತ್ರಿಯವರ ಪದಕವನ್ನು ನೀಡುವ ಸಂಬಂಧ ರಚಿಸಲಾದ ನಿಯಮಗಳಿಗೆ ಸರ್ಕಾರದ ಅನುಮೋದನೆ ನೀಡಲಾಗಿದೆ.

ಮೇಲೆ ಓದಲಾದ ಕ್ರ.ಸಂ (2)ರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು) ಪ್ರಸ್ತಾವನೆಯಲ್ಲಿ ಅರಣ್ಯ ಇಲಾಖೆಯಲ್ಲಿ ವೃತ್ತವಾರು ಸಮಿತಿ ಹಾಗೂ ರಾಜ್ಯ ಮಟ್ಟದ ಸಮಿತಿಗಳನ್ನು ರಚಿಸಲಾಗಿದ್ದು, ಸರ್ಕಾರಿ ಆದೇಶದಲ್ಲಿ ಸೂಚಿಸಿರುವಂತೆ ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ ತಡೆಗಟ್ಟುವಿಕೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು, ನೆಡುತೋಪು ಬೆಳಸುವಂತಹ ಸಾಧನೆ, ಅಭಿವೃದ್ಧಿ ಕಾರ್ಯಗಳು, ಮಾನವ ಪ್ರಾಣಿ ಸಂಘರ್ಷ ಹಾಗೂ ಇತರೆ ನವೀನ ಆಲೋಚನೆಗಳನ್ನು ಉಪಯೋಗಿಸಿರುವ ಇತ್ಯಾದಿ ಕೆಲಸ ಕಾರ್ಯಗಳ ಮೂಲಕ ಗಣನೀಯ ಸಾಧನೆ ಮಾಡಿದ ಅರಣ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಿಂದ ಸ್ವೀಕರಿಸಿದ ಅರ್ಜಿಗಳನ್ನು ವ್ಯತ್ತವಾರು ಸಮಿತಿಗಳಿಂದ ಕ್ರೋಢೀಕರಿಸಿ, ವೃತ್ತಮಟ್ಟದಿಂದ ಸ್ವೀಕೃತವಾದ ಅರ್ಜಿಗಳನ್ನು ರಾಜ್ಯ ಮಟ್ಟದ ಸಮಿತಿಯ ಸಭೆಯಲ್ಲಿ ಕೂಲಂಕಷವಾಗಿ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗಳು ಮಾಡಿರುವ ಸಾಧನೆ ಅರ್ಹತೆಗಳನ್ನು ಸರ್ಕಾರದ ಅದೇಶದಲ್ಲಿ ತಿಳಿಸಿರುವ ಮಾನದಂಡಗಳಂತೆ ವೃಂದವಾರು ಹಾಗೂ ಕ್ಷೇತ್ರವಾರು ಅಂತಿಮಗೊಳಿಸಿ ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿ, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ, ಗಸ್ತು ಅರಣ್ಯ ಪಾಲಕ, ವಾಹನ ಚಾಲಕ, ನಡುತೋಪು ಕಾವಲುಗಾರ, ಆನೆ ಮಾವುತ, ಆನೆ ಜಮೇದಾರ, ಕ್ಷೇಮಾಭಿವೃದ್ಧಿ ನೌಕರರು/ಸಿಬ್ಬಂದಿಗಳನ್ನು ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕೆ ಅರ್ಹರೆಂದು ಪರಿಗಣಿಸಿ ಪ್ರಸ್ತಾವನೆಯನ್ನು ಶಿಫಾರಸ್ಸು ಮಾಡಿ ಸಲ್ಲಿಸಿರುತ್ತಾರೆ.

ಸರ್ಕಾರವು ಪ್ರಸ್ತಾವನೆಯನ್ನು ಸಮಗ್ರವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ: ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂರಕ್ಷಣೆ, ಅರಣ್ಯ ಕೃಷಿ, ಅರಣ್ಯ ನಿರ್ವಹಣೆ ತರಬೇತಿ, ಸಂಶೋಧನೆ, ಕಾರ್ಯಯೋಜನೆ, ಜನರ ಪಾಲ್ಗೊಳ್ಳುವಿಕೆ, ಅಭಿವೃದ್ಧಿ ಕಾರ್ಯಗಳು, ಮಾನವ ಪ್ರಾಣಿ ಸಂಘರ್ಷ, ಇತರ ನವೀನ ಆಲೋಚನೆಗಳನ್ನು ಉಪಯೋಗಿಸಿ ಗಣನೀಯ ಸಾಧನೆ, ಅರಣ್ಯ ವನ್ಯಜೀವಿ, ಅಪರಾಧಗಳ ತಡೆ ಮತ್ತು ವಶಕ್ಕೆ ತೆಗೆದುಕೊಳ್ಳುವುದು, ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆಗೈದ, ಅರಣ್ಯಕ್ಕೆ ಸಂಬಂಧಿಸಿದಂತೆ ಕೆಲಸಗಳಲ್ಲಿ ಯಾವುದೇ ರೀತಿಯ ಶೌರ್ಯ ಮತ್ತು ದಿಟ್ಟತನ ತೋರಿಸಿರುವ ಕೆಳಕಂಡ ಅಧಿಕಾರಿ/ಸಿಬ್ಬಂದಿಗಳಿಗೆ 2024 ನೇ ಸಾಲಿನ ಮುಖ್ಯಮಂತ್ರಿಗಳ ಪದಕವನ್ನು ಪ್ರಧಾನ ಮಾಡಲು ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read