HomeLatest NewsMysore Dasara : ವಿಶ್ವವಿಖ್ಯಾತ 'ಮೈಸೂರು ದಸರಾ'ಗೆ ಇಂದು ಸಾಹಿತಿ ‘ಬಾನು ಮುಷ್ತಾಕ್ ಚಾಲನೆ’ :...

Mysore Dasara : ವಿಶ್ವವಿಖ್ಯಾತ ‘ಮೈಸೂರು ದಸರಾ’ಗೆ ಇಂದು ಸಾಹಿತಿ ‘ಬಾನು ಮುಷ್ತಾಕ್ ಚಾಲನೆ’ : ಬಿಗಿ ಬಂದೋಬಸ್ತ್ |WATCH VIDEO

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಇಂದು ಆರಂಭವಾಗಲಿದ್ದು, ಬೆಳಗ್ಗೆ 10 ರಿಂದ 10 :40 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ದೇವಿ ಸನ್ನಿಧಿಯಲ್ಲಿ ಸಾಹಿತಿ ಬಾನು ಮುಷ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೈಸೂರು ದಸರಾ ಕುರಿತು ಸರ್ಕಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ.
ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ. ಮೈಸೂರು ದಸರಾದ ಆಕರ್ಷಣೆಯ ಕೇಂದ್ರ ಬಿಂದುವಾದ ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಕರುನಾಡಿನ ಮನೆಮಕ್ಕಳಾಗಿರುವ ಅಭಿಮನ್ಯು – ಭೀಮನ ಜೋಡಿ ಈ ಬಾರಿಯ ಮೈಸೂರು ದಸರಾದ ಮೆರುಗು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ನಾಡಬಂಧುಗಳಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರುತ್ತಾ, ದಸರಾದ ಪೂರ್ವತಯಾರಿಗಳ ಕುರಿತ ಈ ಸುಂದರ ವೀಡಿಯೋವನ್ನು ನಿಮ್ಮೆದುರು ಇಡುತ್ತಿದ್ದೇವೆ. ನೋಡಿ, ಅನಿಸಿಕೆ ಹಂಚಿಕೊಳ್ಳಿ ಎಂದು ಸರ್ಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ


For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular