HomeKarnatakaಹಿರಿಯ ಸಾಹಿತಿ ಡಾ. ಕಮಲ ಹಂಪನಾ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ ; ಸಿಎಂ ಸಿದ್ದರಾಮಯ್ಯ...

ಹಿರಿಯ ಸಾಹಿತಿ ಡಾ. ಕಮಲ ಹಂಪನಾ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ ; ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಹಿರಿಯ ಸಾಹಿತಿ ಡಾ. ಕಮಲ ಹಂಪನಾ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ. ಕಮಲ ಹಂಪನಾ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದು ಅಂತಿಮನಮನ ಸಲ್ಲಿಸಿದ ನಂತರ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ. ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ. ನಾಡು ನುಡಿಗೆ ಅಪಾರ ದುಡಿದ ಅವರ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular