ದೆಹಲಿಯಲ್ಲಿ ಸಚಿನ್ ತೆಂಡೂಲ್ಕರ್ ಭೇಟಿಯಾದ ಸಿದ್ಧರಾಮಯ್ಯ

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಸಿಎಂ ಸಿದ್ದರಾಮಯ್ಯ ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ.

ಭೇಟಿ ವೇಳೆ ಸಚಿನ್ ತೆಂಡೂಲ್ಕರ್ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗುವಾಗ ಇಬ್ಬರ ಆಕಸ್ಮಿಕ ಭೇಟಿ ನಡೆದಿದೆ.

“ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ. ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ.’’ ಎಂದು ಸಿಎಂ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿದ್ದಾರೆ.

https://twitter.com/siddaramaiah/status/1742910545156800607

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read