HomeKarnatakaBREAKING: ಬೆಂಗಳೂರಿನಲ್ಲಿ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಯುವತಿ ಆತ್ಮಹತ್ಯೆ

BREAKING: ಬೆಂಗಳೂರಿನಲ್ಲಿ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಯುವತಿ ಆತ್ಮಹತ್ಯೆ

ಬೆಂಗಳೂರು: ಕಳೆದ ಮೂರ್ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಯುವತಿ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಸಂಜೀವಿನಿ ನಗರದ ಬಾಡಿಗೆ ಮನೆಯಲ್ಲಿ ಯುವತಿ ನೇಣಿಗೆ ಕೊರಳೊಡ್ಡಿದ್ದಾರೆ. ಮೆಘಾಲಯ ಮೂಲದ ಅಗತಾ ಬೈತಿಯಂಗಂ (35) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಯುವತಿ ಅಗತಾ, ಮಣಿಪುರ ಮೂಲದ ನವಾಜ್ ಷರೀಫ್ ಎಂಬಾತನ ಜೊತೆ ವಾಸವಾಗಿದ್ದರು.

ಇಬ್ಬರೂ ಕೆಲ ವರ್ಷಗಳಿಂದ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದು, ಒಂದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನವಾಜ್ ಷರೀಫ್ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಯುವತಿ ಕೂಡ ಕೆಲಸಕ್ಕೆ ಹೋಗುತ್ತಿದ್ದರು. ಯುವತಿ ಅಗತಾ ತನ್ನ ತಾಯಿ, ಸಹೋದರಿ ಯಾರೊಂದಿಗೇ ಫೋನ್ ನಲ್ಲಿ ಮಾತನಾಡಿದರೂ ಅನುಮಾನಿಸುತ್ತಿದ್ದ ನವಾಜ್ ಷರೀಫ್ ಗಲಾಟೆ ಮಾಡುತ್ತಿದ್ದ. ಪದೇ ಪದೇ ಜಗಳ ಮಾಡುತ್ತಿದ್ದ. ಯಾರೊಂದಿಗೂ ಮಾತನಾಡದಂತೆ ಹೇಳುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ತೀವ್ರವಾಗಿ ಮನನೊಂದಿದ್ದ ಅಗತಾ, ಇದೀಗ ಬಾಡಿಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular