HomeKarnatakaಉದ್ಯೋಗಾಂಕ್ಷಿಗಳ ಗಮನಕ್ಕೆ ; ಬಳ್ಳಾರಿಯಲ್ಲಿ ನಾಳೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉದ್ಯೋಗಾಂಕ್ಷಿಗಳ ಗಮನಕ್ಕೆ ; ಬಳ್ಳಾರಿಯಲ್ಲಿ ನಾಳೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.16 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ನೇರ ಸಂದರ್ಶನವು ನಗರದ ಕಪ್ಪಗಲ್ ರಸ್ತೆಯ ಭರತ್ ಕುಮಾರ್ ಆಸ್ಪತ್ರೆ ಹತ್ತಿರದ ಭ್ರಮಯ್ಯ ಕಾಂಪೌAಡ್ ಎದುರುಗಡೆಯ ಐಎಎಫ್‌ಎಲ್ ಸಮಸ್ತ ಫೈನಾನ್ಸ್ ಲಿಮಿಟೆಡ್‌ನಲ್ಲಿ ನಡೆಯಲಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಬೇಕಾದ ದಾಖಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಧಾರ್ ಕಾರ್ಡ್, ಸ್ವ ವಿವರಗಳೊಂದಿಗೆ ಹಾಜರಾಗಬೇಕು. ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆ ಹೊಂದಿದ ಆಸಕ್ತ ಆಭ್ಯರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular