
ಈ ವಿಡಿಯೋ ವೈರಲ್ ಆದ ಬಳಿಕ ದೇಶದ ಪ್ರಮುಖ ಇಸ್ಲಾಮಿಕ್ ಸಂಘಟನೆಗಳಲ್ಲಿ ಒಂದಾದ ಜಮಿಯತ್ ಉಲಾಮಾ ಇ ಹಿಂದ್, ಹಿಂದೂ ವಿದ್ಯಾರ್ಥಿಗಳ ಎದುರು ಅಲ್ಲಾ ಹು ಅಕ್ಬರ್ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂಪಾಯಿ ಬಹುಮಾನವನ್ನು ಘೋಷಣೆ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಜಮೈತ್ ತನ್ನ ಸಾಂವಿಧಾನಿಕ ಮತ್ತು ಧಾರ್ಮಿಕ ಹಕ್ಕುಗಳಿಗಾಗಿ ತೀವ್ರ ಪ್ರತಿಭಟನೆಗಳ ನಡುವೆ ಬೀಬಿ ಮುಸ್ಕಾನ್ ಖಾನ್ ಎದ್ದು ನಿಂತಿದ್ದಾರೆ ಎಂದು ಬರೆದುಕೊಂಡಿದೆ.
ಇತ್ತ ರಾಜ್ಯ ಹೈಕೋರ್ಟ್ ಹಿಜಬ್ ವಿವಾದ ಕುರಿತ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ. ಮುಖ್ಯ ನ್ಯಾಯಮೂರ್ತಿಗಳು ವಿಸ್ತೃತ ಪೀಠವನ್ನು ರಚನೆ ಮಾಡುವವರೆಗೂ ಯಾರೂ ಮಧ್ಯಂತರ ಆದೇಶಕ್ಕಾಗಿ ಅರ್ಜಿಯನ್ನು ಸಲ್ಲಿಸುವಂತಿಲ್ಲ. ಮಧ್ಯಂತರ ಆದೇಶದ ಅರ್ಜಿಗಳನ್ನೂ ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ಪೀಠವೇ ಕೈಗೆತ್ತಿಕೊಳ್ಳುತ್ತದೆ. ಅಲ್ಲಿಯವರೆಗೂ ರಾಜ್ಯದಲ್ಲಿ ಯಥಾಸ್ಥಿತಿ ಮುಂದುವರಿಯಲಿದ್ದು ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಕಾಲೇಜು ಪ್ರವೇಶಿಸುವಂತಿಲ್ಲ ಎಂದು ಹೇಳಿದೆ.