alex Certify ʼಡಿ ಬಾಸ್ʼ ಅಭಿಮಾನಿಗಳಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ 10ರಂದು ದರ್ಶನ್ 55ನೇ ಸಿನಿಮಾದ ಟೈಟಲ್ ರಿವೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಡಿ ಬಾಸ್ʼ ಅಭಿಮಾನಿಗಳಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ 10ರಂದು ದರ್ಶನ್ 55ನೇ ಸಿನಿಮಾದ ಟೈಟಲ್ ರಿವೀಲ್

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ಅಂದಮೇಲೆ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿರುತ್ತದೆ. ಇದೀಗ ದರ್ಶನ್ ಅವರ 55ನೇ ಸಿನಿಮಾದ ಶೀರ್ಷಿಕೆಯನ್ನು ಇದೇ ತಿಂಗಳು ಸೆಪ್ಟೆಂಬರ್ 10 ಗಣಪತಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.

BIG NEWS: ʼವರ್ಕ್​ ಫ್ರಮ್​ ಹೋಮ್ʼ​ನಲ್ಲಿದ್ದ ಸಿಬ್ಬಂದಿಯನ್ನು ಕಚೇರಿಗೆ ಕರೆಸಿಕೊಳ್ಳಲು ಮುಂದಾಗಿದೆ ಈ ಕಂಪನಿ

ಈ ವಿಷಯ ತಿಳಿಯುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ವಿ. ಹರಿಕೃಷ್ಣ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಶೈಲಜಾ ನಾಗ್-ಬಿ ಸುರೇಶ್ ನಿರ್ಮಾಣ ಮಾಡುತ್ತಿದ್ದಾರೆ. ಮಾರ್ಚ್ ತಿಂಗಳಲ್ಲಿ ರಿಲೀಸ್ ಆಗಿದ್ದ ದರ್ಶನ್ ಅವರ ‘ರಾಬರ್ಟ್’ ಚಿತ್ರಕ್ಕೆ ಭರ್ಜರಿ ಯಶಸ್ಸು ಸಿಕ್ಕಿತ್ತು. ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...