ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್ ನ ಮುಚ್ಚಿರುವ 22 ಕೋಣೆಗಳನ್ನು ತೆರೆಯುವಂತೆ ಭಾರತೀಯ ಪುರಾತತ್ವ ಸಮೀಕ್ಷೆ ಇಲಾಖೆಗೆ ಸೂಚನೆ ನೀಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಸುಭಾಷ್ ವಿದ್ಯಾರ್ಥಿ ಮತ್ತು ದೇವೇಂದ್ರ ಕುಮಾರ್ ಉಪಾಧ್ಯಾಯ ಅವರಿದ್ದ ವಿಭಾಗೀಯ ಪೀಠವು ರಜನೀಶ್ ಸಿಂಗ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.
BIG BREAKING: ಒಂದೇ ದಿನದಲ್ಲಿ ಮತ್ತೆ 2,800 ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢ; ಸಾವಿನ ಸಂಖ್ಯೆ ದಿಢೀರ್ ಕುಸಿತ
ತಾಜ್ ಮಹಲ್ ಇತಿಹಾಸಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಇದಕ್ಕೆ ಸಂಬಂಧಿಸಿದ ಸಮಸ್ಯೆಯು ನ್ಯಾಯಾಲಯದ ವ್ಯಾಪ್ತಿಗೆ ಒಳಪಡುವುದಿಲ್ಲ. ಈ ವಿಚಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಇತಿಹಾಸಕಾರರಿಗೆ ಬಿಡಬೇಕು ಎಂದು ಪೀಠ ಹೇಳಿದೆ.
ಅಯೋಧ್ಯೆಯ ಬಿಜೆಪಿ ಘಟಕದ ಮುಖ್ಯಸ್ಥರಾಗಿರುವ ರಜನೀಶ್ ಸಿಂಗ್ ಅವರು, ತಾಜ್ ಮಹಲ್ ನ ಇತಿಹಾಸವನ್ನು ತಿಳಿಯಬೇಕಾದರೆ ಸತ್ಯಶೋಧನಾ ತನಿಖೆ ನಡೆಯಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 22 ಕೋಣೆಗಳನ್ನು ತೆರೆಯುವಂತೆ ಆದೇಶ ನೀಡಬೇಕೆಂದು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು.