
ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾವನ್ನು ಜನರು ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ಈ ಸಿನಿಮಾಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ದುರಾದೃಷ್ಟವಶಾತ್ ನಮ್ಮ ದೇಶದಲ್ಲಿನ ಜನರು ಈ ಪ್ರವೃತ್ತಿಯನ್ನು ಹೊಂದಿದ್ದಾರೆ. ಎಲ್ಲವನ್ನೂ ರಾಜಕೀಯಗೊಳಿಸುವುದು ಹಾಗೂ ವಿವಾದವನ್ನು ಹುಟ್ಟಿಸುವುದೇ ಇವರ ಕೆಲಸ ಎಂದು ಹೇಳಿದರು.
ಈ ಸಿನಿಮಾವು ಜಮ್ಮು ಮತ್ತು ಕಾಶ್ಮೀರದಿಂದ ಕಾಶ್ಮೀರಿ ಪಂಡಿತರ ವಲಸೆಯನ್ನು ತೋರಿಸಿದೆ. ಆ ಸಮಯದಲ್ಲಿ ನಡೆದ ಘಟನೆಯ ನೈಜತೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಆದರೆ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಈ ಸಿನಿಮಾವನ್ನು ಟೀಕಿಸುತ್ತಿವೆ ಎಂದು ಹೇಳಿದರು.
ಇತ್ತೀಚೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಿನಿಮಾದ ಮೂಲಕ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಕೇಂದ್ರದಲ್ಲಿ 8 ವರ್ಷ ಸರ್ಕಾರವಿದೆ, ಇಲ್ಲಿಯವರೆಗೆ ಕಾಶ್ಮೀರಿ ಪಂಡಿತರಿಗಾಗಿ ಏನು ಮಾಡಿದ್ದಾರೆ ಎಂದು ಕೇಜ್ರಿವಾಲ್ ಬಿಜೆಪಿಯನ್ನು ಕೇಳಿದ್ದರು. ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯವನ್ನು ಬಿಜೆಪಿ ರಾಜಕೀಯಗೊಳಿಸಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.