ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿದ್ದರೂ ಎಲ್ಲರ ಮನದಲ್ಲಿ ಅವರು ಶಾಶ್ವತವಾಗಿ ನೆಲೆಸಿದ್ದಾರೆ. ಅವರನ್ನು ರಾಜ್ಯದ ಜನತೆ ಪ್ರತಿದಿನವೂ ಸ್ಮರಿಸಿಕೊಂಡು ಅವರು ಮಾಡಿರುವ ಮಾನವೀಯ ಕಾರ್ಯಗಳನ್ನು ಕೊಂಡಾಡುತ್ತಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಈಗಲೂ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೇ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದರು. ಬಳಿಕ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೂ ತೆರಳಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಸಾಂತ್ವನ ಹೇಳಿದ್ದರು.
ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮೊದಲಾದವರಿದ್ದರು.