ಬೆಂಗಳೂರು: ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ದೃಶ್ಯವಿದ್ದು, ಈ ಕುರಿತು ಕಿಡಿಕಾರಿರುವ ಸಂಸದೆ ಶೋಭಾ ಕರಂದ್ಲಾಜೆ ಹಿಂದೂಗಳನ್ನು ಅವಮಾನ ಮಾಡುವುದು ಫ್ಯಾಷನ್ ಆಗಿಬಿಟ್ಟಿದೆ ಎಂದು ಗುಡುಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶೋಭಾ ಕರಂದ್ಲಾಜೆ, ನಮ್ಮ ಭಾವನೆಗಳ ಮೇಲೆ ಸವಾರಿ ಮಾಡಲಾಗುತ್ತಿದೆ. ಇದೇ ರೀತಿ ಬೇರೆ ಧರ್ಮಗಳ ಬಗ್ಗೆ ಚಿತ್ರೀಕರಿಸುವ ಧೈರ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಪೊಗರು ಚಿತ್ರದ ವಿವಾದಾತ್ಮಕ ದೃಶ್ಯ ತೆಗೆದುಹಾಕುವವರೆಗೂ ಚಿತ್ರದ ಸ್ಕ್ರೀನಿಂಗ್ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ನಡುವೆ ಇಂದು ಸುದ್ದಿಗೋಷ್ಠಿ ನಡೆಸಿರುವ ಚಿತ್ರ ನಿರ್ದೇಶಕ ನಂದ ಕಿಶೋರ್ ಚಿತ್ರದಲ್ಲಿನ ವಿವಾದಿತ ದೃಶ್ಯ ನಾಳೆಯೇ ತೆಗೆಯುತ್ತೇವೆ. ಬ್ರಾಹ್ಮಣ ಸಮುದಾಯಕ್ಕೆ ನೋವಾಗಿದ್ದರೆ ಕ್ಷಮೆಯಿರಲಿ ಎಂದು ತಿಳಿಸಿದ್ದಾರೆ.
https://twitter.com/ShobhaBJP/status/1364159215695130624?ref_src=twsrc%5Egoogle%7Ctwcamp%5Eserp%7Ctwgr%5Etweet