alex Certify ʼರಾಕಿಂಗ್‌ ಸ್ಟಾರ್‌ʼ ಯಶ್‌ ಕಟೌಟ್‌ ಗೆ ಕ್ಷೀರಾಭಿಷೇಕ; ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼರಾಕಿಂಗ್‌ ಸ್ಟಾರ್‌ʼ ಯಶ್‌ ಕಟೌಟ್‌ ಗೆ ಕ್ಷೀರಾಭಿಷೇಕ; ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ರಾಜ್ಯದಾದ್ಯಂತ ಇಂದು ಕೆಜಿಎಫ್‌ -2 ಸಂಭ್ರಮ ಮುಗಿಲು ಮುಟ್ಟಿದ್ದು, ನೆಚ್ಚಿನ ನಟನ ಚಿತ್ರದ ಬಿಡುಗಡೆಯನ್ನು ಅಭಿಮಾನಿಗಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ವೀಕ್ಷಣೆಗೆ ಮಧ್ಯರಾತ್ರಿಯಿಂದಲೇ ಕಾದು ಕುಳಿತಿದ್ದ ಪ್ರೇಕ್ಷಕರು ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ.

ಧಾರವಾಡದಲ್ಲೂ ಯಶ್‌ ಅಭಿಮಾನಿಗಳಲ್ಲಿ ದೊಡ್ಡ ಸಂಭ್ರಮ ಮನೆ ಮಾಡಿದ್ದು, ರಾಕಿಂಗ್‌ ಸ್ಟಾರ್‌ ಕಟೌಟ್‌ ಗೆ ಕ್ಷೀರಾಭಿಷೇಕ ಮಾಡಿದ್ದಾರೆ. ಜೊತೆಗೆ ಪಟಾಕಿ ಸಿಡಿಸಿ ಸಂತಸ ಹಂಚಿಕೊಂಡಿದ್ದಾರೆ.

ಇನ್ನು ರಾಜ್ಯದ ವಿವಿಧ ಭಾಗಗಳಲ್ಲೂ ಕೆಜಿಎಫ್‌ – 2 ಹವಾ ಜೋರಾಗಿದ್ದು, ಬಹುತೇಕ ಎಲ್ಲ ಚಿತ್ರಮಂದಿರಗಳಲ್ಲಿ ಟಿಕೆಟ್‌ ಈಗಾಗಲೇ ಸೋಲ್ಡ್‌ ಔಟ್‌ ಆಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...