alex Certify ʼಲಿವ್‌ ಇನ್‌ʼ ಸಂಬಂಧದಿಂದ ಹುಟ್ಟಿದ ಮಗುವಿಗೂ ತಂದೆಯ ಆಸ್ತಿ ಮೇಲಿದೆ ಹಕ್ಕು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಲಿವ್‌ ಇನ್‌ʼ ಸಂಬಂಧದಿಂದ ಹುಟ್ಟಿದ ಮಗುವಿಗೂ ತಂದೆಯ ಆಸ್ತಿ ಮೇಲಿದೆ ಹಕ್ಕು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಲಿವ್‌ಇನ್‌ ಸಂಬಂಧದಲ್ಲಿ ಜನಿಸುವ ಮಗುವಿನ ಭವಿಷ್ಯದ ಕುರಿತಂತೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಪುರುಷ ಮತ್ತು ಮಹಿಳೆ ದೀರ್ಘಕಾಲದವರೆಗೆ ಸಹಬಾಳ್ವೆ ನಡೆಸಿದರೆ ಅಥವಾ ಲಿವ್‌ ಇನ್‌ ಸಂಬಂಧದಲ್ಲಿದ್ದರೆ ಅವರ ಮಗುವಿಗೆ ಪೂರ್ವಜರ ಆಸ್ತಿಯಲ್ಲಿ ಪಾಲನ್ನು ನಿರಾಕರಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ತಂದೆ ಮತ್ತು ತಾಯಿ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಮಗುವಿಗೆ ಆಸ್ತಿಯಲ್ಲಿ ಹಕ್ಕಿಲ್ಲವೆಂದು ಕೇರಳ ಹೈಕೋರ್ಟ್‌ ತೀರ್ಪು ನೀಡಿತ್ತು.

ಆದರೆ ಮಗುವಿನ ಪೋಷಕರು ಮದುವೆಯಾಗದಿದ್ದರೂ, ಅವರು ದೀರ್ಘಕಾಲದವರೆಗೆ ಪತಿ-ಪತ್ನಿಯಂತೆ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಡಿಎನ್ಎ ಪರೀಕ್ಷೆಯಲ್ಲಿ ಮಗು ತಮ್ಮದೇ ಎಂದು ಸಾಬೀತುಪಡಿಸಿದರೆ, ಆ ಮಗು ತಂದೆಯ ಆಸ್ತಿಗೆ ಅರ್ಹವಾಗುತ್ತದೆ ಎಂದು ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ತಂದೆಯ ಆಸ್ತಿಯಿಂದ ವಂಚಿತನಾಗಿದ್ದೇನೆಂದು ವ್ಯಕ್ತಿಯೊಬ್ಬ ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದ. ತಾನು ಅಕ್ರಮ ಸಂತಾನ ಎಂದು ಹೇಳುವ ಮೂಲಕ ಆಸ್ತಿ ಹಕ್ಕುಗಳಿಂದ ತನ್ನನ್ನು ಹೊರಹಾಕಲಾಗಿದೆ ಎಂದು ಆತ ವಾದಿಸಿದ್ದ. ಆದ್ರೆ ಆ ವ್ತಕ್ತಿಯ ಹೆತ್ತವರು ಮದುವೆಯೇ ಆಗಿಲ್ಲ ಎಂದು ಉಲ್ಲೇಖಿಸಿದ್ದ ಕೇರಳ ಹೈಕೋರ್ಟ್‌, ಆಸ್ತಿಯ ಮೇಲೆ ಆತನಿಗೆ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಆತ ಸುಪ್ರೀಂ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ವಿಕ್ರಮ್ ನಾಥ್ ಅವರಿದ್ದ ಪೀಠ, ಕೇರಳ ಹೈಕೋರ್ಟ್‌ ತೀರ್ಪನ್ನು ತಳ್ಳಿ ಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ 2009ರಲ್ಲಿ ತೀರ್ಪು ನೀಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...