ಸಂವಿಧಾನ ದಿನ ಆಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಡಾ||ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಅವರು ಸಮಾಜ ಕಲ್ಯಾಣ ಇಲಾಖೆ ಮುದ್ರಿಸಿರುವ ಭಾರತ ಸಂವಿಧಾನ ದ್ವಿಭಾಷಾ ಮಹಾಗ್ರಂಥಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಮುನಿರಾಜು, ಶಾಸಕ ಎನ್. ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.