alex Certify ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಶಿಕ್ಷಕಿ ಸ್ಥಾನ ನೀಡಲು NEP ಶಿಫಾರಸ್ಸು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಶಿಕ್ಷಕಿ ಸ್ಥಾನ ನೀಡಲು NEP ಶಿಫಾರಸ್ಸು

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ ಸ್ವರೂಪ ನೀಡಲು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ.

ಅಂಗನವಾಡಿ ಕಾರ್ಯಕರ್ತೆಯರನ್ನು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕಲಿಸುವ ಜೊತೆಗೆ ಬಾಣಂತಿಯರು, ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಲು, ಪೌಷ್ಟಿಕ ಆಹಾರ ವಿತರಣೆ ಸೇರಿದಂತೆ ಸರ್ಕಾರದ ಹಲವು ಯೋಜನೆಗಳ ಅನುಷ್ಠಾನಕ್ಕಾಗಿ ಬಳಸಿಕೊಳ್ಳಲಾಗುತ್ತಿತ್ತು.

ಇದೀಗ ಅವರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿರುವುದರಿಂದ ಅವರು ಪಡೆಯುತ್ತಿರುವ ಗೌರವ ಧನ, ವೇತನವಾಗಿ ಪರಿವರ್ತನೆಯಾಗಲಿದೆ. ಜೊತೆಗೆ ಸೇವಾ ಭದ್ರತೆಯೂ ದೊರೆಯಲಿದೆ. ಉತ್ತರಕಾಂಡ ರಾಜ್ಯವು ಇದನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದು, ಕರ್ನಾಟಕದಲ್ಲೂ ಇದನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...