alex Certify ಅಂಗನವಾಡಿ ಕಾರ್ಯಕರ್ತೆಯರಿಗೆ ಕಳಪೆ ಗುಣಮಟ್ಟದ ಮೊಬೈಲ್; ಹಿಂದಿರುಗಿಸಲು ನಿರ್ಧಾರ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರಿಗೆ ಕಳಪೆ ಗುಣಮಟ್ಟದ ಮೊಬೈಲ್; ಹಿಂದಿರುಗಿಸಲು ನಿರ್ಧಾರ…!

ಅಂಕಿ ಅಂಶಗಳನ್ನು ದಾಖಲು ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಗಳನ್ನು ನೀಡಲಾಗಿದ್ದು, ಆದರೆ ಈ ಮೊಬೈಲ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದಕ್ಕೆ ಪುಷ್ಟಿ ನೀಡುವಂತೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ತಮಗೆ ನೀಡಲಾಗಿದ್ದ ಮೊಬೈಲ್ ಗಳು ಕಳಪೆ ಗುಣಮಟ್ಟದಿಂದ ಕೂಡಿರುವ ಕಾರಣ ಅಂಕಿ ಅಂಶಗಳನ್ನು ದಾಖಲು ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ.

ಈ ಕುರಿತಂತೆ ಭಾನುವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆ ಅಧ್ಯಕ್ಷೆ ತ್ರಿವೇಣಿ ಕೆಪ್ಪಿಗೆ, ಮೊಬೈಲ್ ಕಳಪೆ ಗುಣಮಟ್ಟದಿಂದ ಕೂಡಿರುವ ಕಾರಣ ಅಂಕಿ ಅಂಶ ದಾಖಲು ಮಾಡಲು ಆಗುತ್ತಿಲ್ಲ. ಹೀಗಾಗಿ ಸೋಮವಾರದಂದು ಸಿ ಡಿ ಪಿ ಓ ಕಚೇರಿಗೆ ತೆರಳಿ ಅವುಗಳನ್ನು ವಾಪಾಸ್ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...