ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಇವರುಗಳು ಗ್ರಾಚ್ಯುಟಿ ಪಾವತಿ ಕಾಯ್ದೆ 1972 ರ ಅನ್ವಯ ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಅಂಗನವಾಡಿಗಳು ಶಾಸನಬದ್ಧ ಕರ್ತವ್ಯವನ್ನು ನಿರ್ವಹಿಸುತ್ತಿದ್ದು ಸರ್ಕಾರಗಳ ಒಂದು ಭಾಗವಾಗಿದೆ. ಹೀಗಾಗಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯ್ದೆ 1972 ರ ಅನ್ವಯ ಗ್ರಾಚ್ಯುಟಿ ಪಡೆಯಲು ಅರ್ಹರಾಗಿದ್ದಾರೆಯೇ ಎಂದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಪೀಠ ಅಭಿಪ್ರಾಯಪಟ್ಟಿದೆ.