alex Certify ಅಂಗನವಾಡಿ ಮೇಲೆ ಬಿದ್ದ ಮರ; ಅದೃಷ್ಟವಶಾತ್ ಮಕ್ಕಳು ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಮೇಲೆ ಬಿದ್ದ ಮರ; ಅದೃಷ್ಟವಶಾತ್ ಮಕ್ಕಳು ಪಾರು

ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದ್ದು ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಬಿರುಗಾಳಿಯಿಂದ ಕೂಡಿದ ಮಳೆಯಿಂದಾಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದಲ್ಲದೆ ಪ್ರಾಣಾಪಾಯವೂ ಸಂಭವಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಮರಗಳು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆಯಾಗಿತ್ತು. ಅಲ್ಲದೆ ಮರ ಉರುಳಿದ ಪರಿಣಾಮ ಮನೆಗಳಿಗೂ ಹಾನಿಯಾಗಿದೆ.

ಸೊರಬ ತಾಲೂಕಿನ ಬಾಡದ ಬೈಲು ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಮೇಲೆ ಮರ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ತೊಂದರೆ ಆಗಿಲ್ಲ. ಈ ಸಂದರ್ಭದಲ್ಲಿ ಒಂಬತ್ತು ಮಕ್ಕಳು ಅಲ್ಲಿ ಇದ್ದರೆನ್ನಲಾಗಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...