ಪ್ರಕರಣವೊಂದರ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್, ಅಂಗಾಂಗ ದಾನಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿದೆ. ಅಂಗಾಂಗ ದಾನ ಮಾಡಲು ವಿವಾಹಿತ ಮಹಿಳೆ ತನ್ನ ಪತಿಯ ಸಮ್ಮತಿ ಪಡೆಯಬೇಕಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರಕರಣ: ವಿವಾಹಿತ ಮಹಿಳೆಯೊಬ್ಬರು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ತಮ್ಮ ತಂದೆಗೆ ಕಿಡ್ನಿ ದಾನ ಮಾಡಲು ಮುಂದಾಗಿದ್ದರು. ಆದರೆ ಇದಕ್ಕೂ ಮುನ್ನ ಪತಿಯಿಂದ ಸಮ್ಮತಿ ಪತ್ರ ತರಬೇಕೆಂದು ಆಸ್ಪತ್ರೆ ಸಿಬ್ಬಂದಿ ಮಹಿಳೆಗೆ ಸೂಚಿಸಿದ್ದು ಇದನ್ನು ಪ್ರಶ್ನಿಸಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿದ್ದ ಏಕಸದಸ್ಯ ಪೀಠ, ವಿವಾಹಿತ ಮಹಿಳೆ ತನ್ನ ಅಂಗಾಂಗ ದಾನ ಮಾಡಲು ಪತಿಯ ಸಮ್ಮತಿ ಪಡೆಯಬೇಕಿಲ್ಲ. ಆದರೆ ದಾನಿಯು ಮಹಿಳೆಯಾಗಿರುವ ಕಾರಣ ಅಂತಹ ಸಂದರ್ಭಗಳಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ ಎಂದು ಹೇಳಿದೆ.