ಹನುಮನ ಜನ್ಮಸ್ಥಳ ಕುರಿತಂತೆ ದೇಶದಾದ್ಯಂತ ಚರ್ಚೆ ನಡೆಯುತ್ತಿದೆ. ಆದರೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟವೇ ಹನುಮಂತನ ಜನ್ಮಸ್ಥಳ ಎಂದು ಪ್ರತಿಪಾದಿಸಿರುವ ರಾಜ್ಯ ಸರ್ಕಾರ, ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಿದೆ.
ರಾಜ್ಯದ ಬಿಜೆಪಿ ಸರ್ಕಾರ ಇದರ ಲಾಭ ಪಡೆಯಬಹುದೆಂಬ ಸುಳಿವು ಸಿಕ್ಕ ತಕ್ಷಣವೇ ಕಾಂಗ್ರೆಸ್ ನಾಯಕರು, ಹನುಮ ಜಯಂತಿ ಅಂಗವಾಗಿ ತಾವು ಮಾಲೆ ಧರಿಸಿದ್ದಲ್ಲದೆ ಪಾದಯಾತ್ರೆ ನಡೆಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿಯಲ್ಲವೆಂಬ ಭಾವನೆ ಮೂಡಿಸಲು ಯತ್ನಿಸಿದ್ದಾರೆ.
ಇದರ ಮುಂದುವರಿದ ಭಾಗವೆಂಬಂತೆ ಇದೀಗ ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಅಂಜನಾದ್ರಿ ಬೆಟ್ಟಕ್ಕೆ ಕರೆದುಕೊಂಡು ಬರಲಾಗುತ್ತಿದೆ ಎಂದು ಹೇಳಲಾಗಿದೆ. ಸದ್ಯದಲ್ಲೇ ಈ ಇಬ್ಬರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.