alex Certify ‘ಅಂಜನಾದ್ರಿ’ ಬೆಟ್ಟಕ್ಕೆ ಭೇಟಿ ನೀಡಲು ಮುಂದಾದ ರಾಹುಲ್ – ಪ್ರಿಯಾಂಕಾ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಂಜನಾದ್ರಿ’ ಬೆಟ್ಟಕ್ಕೆ ಭೇಟಿ ನೀಡಲು ಮುಂದಾದ ರಾಹುಲ್ – ಪ್ರಿಯಾಂಕಾ…!

ಹನುಮನ ಜನ್ಮಸ್ಥಳ ಕುರಿತಂತೆ ದೇಶದಾದ್ಯಂತ ಚರ್ಚೆ ನಡೆಯುತ್ತಿದೆ. ಆದರೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟವೇ ಹನುಮಂತನ ಜನ್ಮಸ್ಥಳ ಎಂದು ಪ್ರತಿಪಾದಿಸಿರುವ ರಾಜ್ಯ ಸರ್ಕಾರ, ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಿದೆ.

ರಾಜ್ಯದ ಬಿಜೆಪಿ ಸರ್ಕಾರ ಇದರ ಲಾಭ ಪಡೆಯಬಹುದೆಂಬ ಸುಳಿವು ಸಿಕ್ಕ ತಕ್ಷಣವೇ ಕಾಂಗ್ರೆಸ್ ನಾಯಕರು, ಹನುಮ ಜಯಂತಿ ಅಂಗವಾಗಿ ತಾವು ಮಾಲೆ ಧರಿಸಿದ್ದಲ್ಲದೆ ಪಾದಯಾತ್ರೆ ನಡೆಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿಯಲ್ಲವೆಂಬ ಭಾವನೆ ಮೂಡಿಸಲು ಯತ್ನಿಸಿದ್ದಾರೆ.

ಇದರ ಮುಂದುವರಿದ ಭಾಗವೆಂಬಂತೆ ಇದೀಗ ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಅಂಜನಾದ್ರಿ ಬೆಟ್ಟಕ್ಕೆ ಕರೆದುಕೊಂಡು ಬರಲಾಗುತ್ತಿದೆ ಎಂದು ಹೇಳಲಾಗಿದೆ. ಸದ್ಯದಲ್ಲೇ ಈ ಇಬ್ಬರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...