alex Certify BIG NEWS: ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ‘ನಂದಿ ಹಿಲ್ಸ್’ ಅಭಿವೃದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ‘ನಂದಿ ಹಿಲ್ಸ್’ ಅಭಿವೃದ್ದಿ

ಚಿಕ್ಕಬಳ್ಳಾಪುರದ ಜನಪ್ರಿಯ ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ನಂದಿಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯ ಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಹೇಳಿದರು.

ರೋಪ್ ವೇ ಬೇಕೆಂದು ಜನರು ಕಳೆದ 15 ವರ್ಷಗಳಿಂದ ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿತ್ತಾದರೂ ಬಳಿಕ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದ್ದು, ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದು ತಿಳಿಸಿದ್ದಾರೆ.

ಜೊತೆಗೆ ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...