alex Certify ಅಂಬೇಡ್ಕರ್ ಅವಹೇಳನ: ಕಿರು ನಾಟಕದಲ್ಲಿ ಅಭಿನಯಿಸಿದ್ದ ಎಲ್ಲ ವಿದ್ಯಾರ್ಥಿಗಳು ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಬೇಡ್ಕರ್ ಅವಹೇಳನ: ಕಿರು ನಾಟಕದಲ್ಲಿ ಅಭಿನಯಿಸಿದ್ದ ಎಲ್ಲ ವಿದ್ಯಾರ್ಥಿಗಳು ಸಸ್ಪೆಂಡ್

ಬೆಂಗಳೂರಿನ ಜೈನ ವಿಶ್ವವಿದ್ಯಾಲಯದ ಸಿಎಂಎಸ್ ವಿಭಾಗವು ಆಯೋಜಿಸಿದ್ದ ಯುವ ಜನೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ್ದು, ಇದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿ ಜಾತಿ ನಿಂದನೆ ಮಾಡಲಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳ ವಿರುದ್ಧ ಎಸ್ಸಿ / ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಜೊತೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಈ ಕುರಿತಂತೆ ದೂರು ದಾಖಲಾಗಿದ್ದು, ಜೊತೆಗೆ ಮಹಾರಾಷ್ಟ್ರದಲ್ಲೂ ಸಹ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದೀಗ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ನಾಟಕದಲ್ಲಿ ಅಭಿನಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಜೊತೆಗೆ ತನಿಖೆಗಾಗಿ ಶಿಸ್ತು ಸಮಿತಿಯನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ವರದಿ ನೀಡುವಂತೆ ಸೂಚಿಸಲಾಗಿದೆ. ಇದರ ಮಧ್ಯೆ ಫೆಬ್ರವರಿ 14ರಂದು ಬೆಂಗಳೂರು ವಿಶ್ವವಿದ್ಯಾಲಯ ಬಂದ್ ಗೆ ಹಲವು ಸಂಘಟನೆಗಳು ಕರೆ ನೀಡಿದ್ದು, ಜೈನ್ ವಿಶ್ವವಿದ್ಯಾಲಯದ ಎದುರು ಸಹ ಅಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...