
ನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ಬಹು ನಿರೀಕ್ಷೆಯ ‘ಶ್ರೀಕೃಷ್ಣ@ gmail.com’ ಚಿತ್ರದ ಟ್ರೈಲರ್ ಅನ್ನು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ 11 ಗಂಟೆಗೆ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಸಂದೇಶ್ ನಾಗರಾಜ್ ತಮ್ಮ ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಡಾರ್ಲಿಂಗ್ ಕೃಷ್ಣ ಅವರಿಗೆ ಜೋಡಿಯಾಗಿ ಭಾವನಾ ಮೆನನ್ ಅಭಿನಯಿಸಿದ್ದಾರೆ. ಅಕ್ಟೋಬರ್ 14ರಂದು ಈ ಸಿನಿಮಾ ತೆರೆಮೇಲೆ ಬರಲಿದೆ.