alex Certify ಅಕ್ಟೋಬರ್‌ 29 ರಂದು ತೆರೆಮೇಲೆ ಬರಲಿದೆ ‘ಭಜರಂಗಿ 2’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 29 ರಂದು ತೆರೆಮೇಲೆ ಬರಲಿದೆ ‘ಭಜರಂಗಿ 2’

ಎ. ಹರ್ಷ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ‘ಭಜರಂಗಿ 2’ ಚಿತ್ರ ವನ್ನು ಮುಂದಿನ ತಿಂಗಳು ಅಕ್ಟೋಬರ್‌ 29ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಈಗಾಗಲೇ ಈ ಸಿನಿಮಾ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಸಾಕಷ್ಟು ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ನಟಿ ಶ್ರುತಿ ಅವರ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದ್ದರು. ಅವರ ವಿಭಿನ್ನ ಗೆಟಪ್ ಹಾಗೂ ಖಡಕ್ ಲುಕ್ ನೋಡಿ ಸಿನಿಪ್ರೇಕ್ಷಕರು ಫಿದಾ ಆಗಿದ್ದಾರೆ.

ಜಯಣ್ಣ- ಭೋಗೇಂದ್ರ ತಮ್ಮ ಜಯಣ್ಣ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಸೆಪ್ಟೆಂಬರ್ 10ರಂದು ತೆರೆಕಾಣಬೇಕಾಗಿದ್ದ ಈ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಇಂದು ಚಿತ್ರತಂಡ ಘೋಷಣೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...