alex Certify ಅಕ್ಟೋಬರ್ 21ಕ್ಕೆ ಬಿಡುಗಡೆಯಾಗಲಿದೆ ಧಮಾಕಾ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 21ಕ್ಕೆ ಬಿಡುಗಡೆಯಾಗಲಿದೆ ಧಮಾಕಾ ಟೀಸರ್

ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ಇತ್ತೀಚೆಗೆ ಟಾಲಿವುಡ್ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ರವಿತೇಜಾ ನಟನೆಯ ಆಕ್ಷನ್ ಎಂಟರ್ ಟೇನರ್ ಕಥಾಹಂದರ ಹೊಂದಿರುವ ‘ಧಮಾಕಾ’ ಚಿತ್ರದಲ್ಲಿ ಶ್ರೀ ಲೀಲಾ ನಾಯಕಿಯಾಗಿ ಅಭಿನಯಿಸಿದ್ದು, ಅಕ್ಟೋಬರ್ 21ಕ್ಕೆ ಈ ಸಿನಿಮಾ ಟೀಸರ್ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದೆ.

ತ್ರಿನಾದ ರಾವ್ ನಿರ್ದೇಶನದ ಈ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಹಾಗೂ ಅಭಿಷೇಕ್ ಅಗರ್ವಾಲ್ ಲಾರ್ಡ್ಸ್ ಲಾಂಛನದಲ್ಲಿ ಅಭಿಷೇಕ್ ಅಗರ್ವಾಲ್ ಹಾಗೂ ಟಿ ವಿಶ್ವಪ್ರಸಾದ್ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಶೂಟಿಂಗ್ ಕೊನೆಯ ಹಂತದಲ್ಲಿದ್ದು, ಬಿಡುಗಡೆ ದಿನಾಂಕ ಘೋಷಣೆ ಮಾಡಲು ಚಿತ್ರ ತಂಡ ಸಿದ್ಧವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...