ಸಿರಿವಂತರು ದೇಶದ ವಿವಿಧ ಭಾಗಗಳಲ್ಲಿ ಅಕ್ರಮ ಆಸ್ತಿ ಖರೀದಿ ಮಾಡುವುದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ʼಒನ್ ನೇಶನ್ ಒನ್ ರಿಜಿಸ್ಟ್ರೇಷನ್ʼ ವ್ಯವಸ್ಥೆಯನ್ನು ಬಜೆಟ್ ನಲ್ಲಿ ಜಾರಿಗೊಳಿಸಲಾಗಿದೆ.
ಆಸ್ತಿ ನೋಂದಣಿ ಪ್ರಕ್ರಿಯೆ ದೇಶದಾದ್ಯಂತ ಏಕರೂಪದಲ್ಲಿರಲಿದ್ದು, ಡಿಜಿಟಲ್ ವ್ಯವಸ್ಥೆಯಲ್ಲಿ ಇದನ್ನು ಜಾರಿಗೊಳಿಸಲಾಗುತ್ತದೆ. ದೇಶದ ಎಂಟು ಭಾಷೆಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ನಡೆಯಲಿದೆ.
ಈ ಪ್ರಕ್ರಿಯೆಯಿಂದ ಅಕ್ರಮವಾಗಿ ಆಸ್ತಿ ಖರೀದಿಸುವವರಿಗೆ ಕಡಿವಾಣ ಬೀಳಲಿದೆ ಎಂಬುದು ಕೇಂದ್ರ ಸರ್ಕಾರದ ಲೆಕ್ಕಾಚಾರವಾಗಿದೆ.