ಅಕ್ರಮ ಕುಡಿಯುವ ನೀರಿನ ಸಂಪರ್ಕ ಹೊಂದಿದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇಂತಹ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ವಿಷಯ ತಿಳಿಸಿದ್ದು, ಮಹಾನಗರ ಪಾಲಿಕೆಗಳು ಸೇರಿದಂತೆ ರಾಜ್ಯಾದ್ಯಂತ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಇಂತಹ ಫಲಾನುಭವಿಗಳಿಂದ ಆಧಾರ್ ಕಾರ್ಡ್ ಪ್ರತಿ ಹಾಗೂ ಸ್ವಯಂ ದೃಢೀಕರಣ ಪ್ರಮಾಣ ಪತ್ರ ಪಡೆದು ಅಕ್ರಮ ನೀರಿನ ಸಂಪರ್ಕಗಳಿಗೆ ಮೀಟರ್ ಅಳವಡಿಸಲಾಗುತ್ತದೆ. ಇದರಿಂದ ಸಕ್ರಮವಾಗುವುದರ ಜೊತೆಗೆ ಸ್ಥಳೀಯ ಸಂಸ್ಥೆಗಳ ಆದಾಯವೂ ಹೆಚ್ಚಿದಂತಾಗುತ್ತದೆ ಎಂದು ಸಚಿವರು ಹೇಳಿದರು.