alex Certify ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ ಕ್ಕೆ ನೋಂದಣಿ ಮಾಡಿಕೊಳ್ಳುವ ಕುರಿತು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ ಕ್ಕೆ ನೋಂದಣಿ ಮಾಡಿಕೊಳ್ಳುವ ಕುರಿತು ಇಲ್ಲಿದೆ ಮಾಹಿತಿ

2023ರ ಜನವರಿ 6, 7 ಮತ್ತು 8ರಂದು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಆದರೆ ಸಮ್ಮೇಳನ ಪ್ರತಿನಿಧಿಗಳ ನೋಂದಣಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ ಎನ್ನಲಾಗಿದೆ.

ಪ್ರತಿನಿಧಿಗಳ ನೋಂದಣಿಗೆ ಅಪ್ಲಿಕೇಶನ್ ರಚಿಸಲಾಗಿದ್ದು ಡಿಸೆಂಬರ್ 1ರಿಂದ ಡಿಸೆಂಬರ್ 18ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ ಕಡ್ಡಾಯವಾಗಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿರಬೇಕು ಎಂಬ ನಿಯಮ ವಿಧಿಸಲಾಗಿತ್ತು. ಆದರೆ ಈವರೆಗೆ ಕೇವಲ 3000 ಮಂದಿ ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಇದೀಗ ನೋಂದಣಿಯನ್ನು ಡಿಸೆಂಬರ್ 25 ರವರೆಗೆ ವಿಸ್ತರಿಸಲಾಗಿದ್ದು, ಅಲ್ಲದೆ ಆನ್ಲೈನ್ ಮಾತ್ರವಲ್ಲದೆ ಆಫ್ ಲೈನ್ ಮೂಲಕವೂ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿರಬೇಕು ಎಂಬ ನಿಯಮದಲ್ಲೂ ಸಡಿಲಿಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...