alex Certify ಅಗ್ನಿಶಾಮಕ ಸಿಬ್ಬಂದಿಯಿಂದ ಬಾವಿಗೆ ಬಿದ್ದಿದ್ದ ಜಿಂಕೆ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಗ್ನಿಶಾಮಕ ಸಿಬ್ಬಂದಿಯಿಂದ ಬಾವಿಗೆ ಬಿದ್ದಿದ್ದ ಜಿಂಕೆ ರಕ್ಷಣೆ

Fire Officials Rescue Deer From Deep Well in Karnataka's Mangaluruಮಂಗಳೂರು: ಆಳವಾದ ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಜಿಂಕೆಯನ್ನು ರಕ್ಷಿಸಿರುವ ಘಟನೆ ಮಂಗಳೂರಿನ ಕಿನ್ಯದಲ್ಲಿ ನಡೆದಿದೆ. ಬಾವಿಯಲ್ಲಿ ಸಿಲುಕಿದ್ದ ಜಿಂಕೆಯನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಕ್ಷಿಸಿದ್ದಾರೆ.

ಬಾವಿಯಿಂದ ಹೊರತೆಗೆದು ರಕ್ಷಿಸಿದ ಜಿಂಕೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಪೊದೆಗಳಿಂದ ಆವೃತವಾಗಿದ್ದ ಆಳವಾದ ಬಾವಿಗೆ ಇಳಿದ ಅಗ್ನಿಶಾಮಕದಳದ ಸಿಬ್ಬಂದಿ, ಜಿಂಕೆಯ ದೇಹಕ್ಕೆ ಹಗ್ಗ ಸುತ್ತಿದ್ದಾರೆ. ಬಳಿಕ ಅದನ್ನು ಮೇಲಕ್ಕೆತ್ತಿದ್ದಾರೆ.

ಜಿಂಕೆಯ ಕಾಲು ಮತ್ತು ಬೆನ್ನೆಲುಬಿಗೆ ಗಾಯಗಳಾಗಿದ್ದು, ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಜಿಂಕೆಯು ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...