alex Certify ಅಡಕೆಗೆ ಎಲೆಚುಕ್ಕಿ ರೋಗ; ಕಂಗೆಟ್ಟಿದ್ದ ಬೆಳೆಗಾರರಿಗೆ ಸರ್ಕಾರದಿಂದ ‘ಬಂಪರ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಕೆಗೆ ಎಲೆಚುಕ್ಕಿ ರೋಗ; ಕಂಗೆಟ್ಟಿದ್ದ ಬೆಳೆಗಾರರಿಗೆ ಸರ್ಕಾರದಿಂದ ‘ಬಂಪರ್ ನ್ಯೂಸ್’

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ.

ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗಕ್ಕೆ ಸಿಂಪಡಿಸುವ ಔಷಧವನ್ನು ಅಡಕೆ ಬೆಳೆಗಾರರಿಗೆ ಉಚಿತವಾಗಿ ನೀಡುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಈ ವಿಷಯ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ತೋಟಗಾರಿಕಾ ಸಚಿವ ಮುನಿರತ್ನ, ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಉಚಿತವಾಗಿ ಔಷಧಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ ಇದಕ್ಕೆ ಬೇಕಾಗುವ ದೋಟಿಯನ್ನು ಸಬ್ಸಿಡಿ ದರದಲ್ಲಿ ನೀಡುವ ಕುರಿತು ತೀರ್ಮಾನಿಸಲಾಗಿದೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...