ತಮ್ಮನ್ನು ಕಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸದಾ ಮನವಿ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅತಿಥಿ ಉಪನ್ಯಾಸಕರ ನೇಮಕಾತಿ ಕಲ್ಪನೆಯನ್ನೆ ರದ್ದುಪಡಿಸಿ ಎಲ್ಲರನ್ನೂ ಕಾಯಂಗೊಳಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕೃಷ್ಣರಾಜನಗರದಲ್ಲಿ ಈ ವಿಷಯ ತಿಳಿಸಿದ್ದು, ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ನೀಡಲು ವೇದಿಕೆ ಕಲ್ಪಿಸಲಾಗುತ್ತದೆ ಎಂದಿದ್ದಾರೆ.
ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ: ದರ ದಾಖಲೆಯ ಕುಸಿತ -8 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ
ಅಲ್ಲದೇ 8000 ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರ್ಕಾರ ತೀರ್ಮಾನಿಸಿದ್ದು, ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವುದರ ಜೊತೆಗೆ ವೇತನ ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದ್ದಾರೆ.