ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆಯನ್ನು 2021 -22 ನೇ ಸಾಲಿಗೆ ಮುಂದುವರೆಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ.
ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೇರೆ ಬೇರೆ ವಿವಿಗಳಲ್ಲಿ ಕಳೆದ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆ ಮುಂದುವರೆಸಲಾಗುವುದು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಒಂದು ದಿನದಮಟ್ಟಿಗೆ ಸೇವೆಯಿಂದ ಬಿಡುಗಡೆ ಮಾಡಿ ಪುನಃ ಸೇವೆಗೆ ಸೇರಿಸಿಕೊಳ್ಳಲಾಗುವುದು.
ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಮತ್ತು ತರಗತಿ ಸಂಖ್ಯೆ ಹೆಚ್ಚಾಗಿರುವುದರಿಂದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಇಲ್ಲದಿದ್ದರೆ ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಅತಿಥಿ ಉಪನ್ಯಾಸಕರನ್ನು ಮುಂದುವರೆಸಲಾಗುವುದು ಎಂದು ಹೇಳಲಾಗಿದೆ.