ಶಿವಮೊಗ್ಗ: ಅತ್ಯಾಚಾರಿಗಳಿಗೆ ಪೊಲೀಸರಾಗಲಿ ಅಥವಾ ಸರ್ಕಾರದ ಬಗ್ಗೆಯಾಗಲಿ ಯಾವುದೇ ಭಯವಿಲ್ಲ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗುವಂತಹ ಕಾನೂನು ಜಾರಿಯಾಗುವ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅತ್ಯಾಚಾರದಂತಹ ಪ್ರಕರಣದಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಕಾನೂನಿನಲ್ಲಿ ತಿದ್ದುಪಡಿ ತರುವ ಅಗತ್ಯವಿದೆ ಎಂದು ಹೇಳಿದರು.
ಈ ಗ್ರಾಮದಲ್ಲಿದೆ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ದೇಗುಲ
ನಾನು ಈ ಹಿಂದೆ ವಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿ 6 ವರ್ಷದ ಮಗುವಿನ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದರು. ಆಗಲು ನಾನು ಘಟನೆ ಖಂಡಿಸಿದ್ದೆ. ಅಂದು ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವ ಬಗ್ಗೆ ಕಾನೂನಿನಲ್ಲಿ ತಿದ್ದುಪಡಿ ತರುವುದಾಗಿ ಭರವಸೆ ನೀಡಿದ್ದರು. ಆದರೆ ಇಂದಿನವರೆಗೂ ಹಿಂದಿನ ಕಾನೂನೇ ಇದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾದಾಗ ಮಾತ್ರ ಇಂತಹ ಪ್ರಕರಣಗಳಿಗೆ ಕಡಿವಾಣ ಬೀಳುತ್ತದೆ ಎಂದು ಹೇಳಿದರು.