
ಪೊಲೀಸರ ಕಾರ್ಯಾಚರಣೆಗೆ ರಾಜ್ಯದ ಜನತೆಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಬಹುಮಾನ ಘೋಷಿಸಲಾಗಿದೆ.
ಇದರ ಮಧ್ಯೆ ನಟ ಜಗ್ಗೇಶ್ ಸಹ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಭೇಧಿಸಿದ ಪೊಲೀಸರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ.