ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಂಧನಕ್ಕೀಡಾಗಿದ್ದ ಆರೋಪಿ ಸಿಂದಗಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಆರೋಪಿಯನ್ನು ಸಿಂದಗಿ ಠಾಣೆ ಪೊಲೀಸರು ಬಂಧಿಸಿದ್ದರು. ಆದರೆ ಇಂದು ಮುಂಜಾನೆ ವೇಳೆ ಆರೋಪಿ ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಕುಟುಂಬಸ್ಥರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರ ನಿರ್ಲಕ್ಷಕ್ಕೆ ಸಾವು ಎಂದು ಆರೋಪಿಸಿದ್ದಾರೆ.
ಹಿಂದೆ ಕೋವಿಡ್ ಸೋಂಕಿಗೆ ಒಳಗಾದವರಿಗೆ ಆನೆ ಬಲ: ಕೋವಾಕ್ಸಿನ್ ಸಿಂಗಲ್ ಡೋಸ್ ನಿಂದ 2 ಡೋಸ್ ಗೆ ಸಮನಾದ ಪ್ರತಿಕಾಯ
ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಗೃಹ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.