
ಖ್ಯಾತ ಉದ್ಯಮಿ ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್ ತೆಕ್ಕೆಗೆ ದೇಶದ ಮತ್ತೊಂದು ಏರ್ಪೋರ್ಟ್ ಸೇರ್ಪಡೆಯಾಗಿದೆ. ಈಗಾಗಲೇ ಅಹಮದಾಬಾದ್, ಲಕ್ನೋ, ಮಂಗಳೂರು, ಜೈಪುರ, ಗುವಾಹಟಿ, ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ನಿರ್ವಹಿಸುತ್ತಿರುವ ಅದಾನಿ ಗ್ರೂಪ್ ಈಗ ಮುಂಬೈ ಏರ್ಪೋರ್ಟ್ ಸಹ ಪಡೆದುಕೊಂಡಿದೆ.
ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ನ ಶೇಕಡಾ 74ರಷ್ಟು ಶೇರುಗಳನ್ನು ಅದಾನಿ ಗ್ರೂಪ್ ಪಡೆದುಕೊಂಡಿದ್ದು, ಮಂಗಳವಾರದಿಂದ ಇದರ ನಿರ್ವಹಣೆಯನ್ನು ಆರಂಭಿಸಿದೆ. ಶೇಕಡಾ 26ರಷ್ಟು ಶೇರುಗಳನ್ನು ಭಾರತೀಯ ವಿಮಾನ ಪ್ರಾಧಿಕಾರ ತನ್ನಲ್ಲೇ ಉಳಿಸಿಕೊಂಡಿದೆ.
ಶಾಲಾ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್
ಮುಂಬೈ ವಿಮಾನ ನಿಲ್ದಾಣವನ್ನು ತನ್ನ ತೆಕ್ಕೆಗೆ ಪಡೆದುಕೊಂಡ ಬಳಿಕ ಗೌತಮ್ ಅದಾನಿ ಈ ಕುರಿತು ಟ್ವೀಟ್ ಮಾಡಿದ್ದು, ಇದನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದರ ಜೊತೆಗೆ ಸ್ಥಳೀಯರಿಗೆ ಸಾವಿರಾರು ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.