ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಉಮಿಕಲ್ ಬೆಟ್ಟದ ಮೇಲೆ 15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಪರಶುರಾಮ್ ಥೀಮ್ ಪಾರ್ಕ್ ನಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದೆ.
ಕಂಚಿನಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗಿದ್ದ ಪರಶುರಾಮ ಪ್ರತಿಮೆಯನ್ನು ಅರ್ಧ ನಕಲಿ ಹಾಗೂ ಅರ್ಧ ಅಸಲಿ ಲೋಹದ ಮೂಲಕ ನಿರ್ಮಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಶನಿವಾರದಂದು ಸ್ಥಳಕ್ಕೆ ಭೇಟಿ ನೀಡಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಮಾತುಗಳನ್ನು ಆಡಿದ್ದಾರೆ.
ಇಲ್ಲಿ ನಿರ್ಮಿಸಲಾಗಿರುವ 33 ಅಡಿ ಎತ್ತರದ ಪರಶುರಾಮ ಮೂರ್ತಿ ಕಂಚಿನದ್ದಲ್ಲ, ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದು, ಇದನ್ನು ತೆಗೆದು ನೈಜ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.