alex Certify ಅನಧಿಕೃತ ಸಾಗುವಳಿದಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಧಿಕೃತ ಸಾಗುವಳಿದಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಅನಧಿಕೃತ ಸಾಗುವಳಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಮೇ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಕಂದಾಯ ಸಚಿವ ಆರ್. ಅಶೋಕ್ ಈ ವಿಷಯ ತಿಳಿಸಿದ್ದು, 2005, ಜನವರಿ 1ಕ್ಕಿಂತಲೂ ಪೂರ್ವದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರಿಗೆ ಇದು ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 94ಎ (4)ರ ಅಡಿ ನಮೂನೆ 57ರಲ್ಲಿ ಮೇ 31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಬಿಜೆಪಿಯ ಹರತಾಳು ಹಾಲಪ್ಪ ಅವರ ಪ್ರಶ್ನೆಗೆ ಈ ಉತ್ತರ ನೀಡಿರುವ ಸಚಿವರು, ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮಗೊಳಿಸಲು ಭೂ ಕಂದಾಯ ಕಾಯ್ದೆ 1964ರ ಕಲಂ 94 ಎ, 94 ಬಿ, 94ಎ (4) ರ ಅಡಿ ನಮೂನೆ 50, 53 ರಲ್ಲಿ ಅರ್ಜಿ ಸಲ್ಲಿಸದವರಿಗೆ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿ, ಅವಧಿ ವಿಸ್ತರಿಸಲಾಗಿದೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...