ಬೆಂಗಳೂರು : ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು, ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಎನ್ ಟಿ ಐ ಕಾಲೋನಿಯಲ್ಲಿ ವಾಸಿಸುತ್ತಿದ್ದ ಕಮಲಾಕರ್(50) ಎಂಬ ಅಧಿಕಾರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಪಾರ್ಕಿನ್ಸನ್ ರೋಗದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಇವರು ಮಾನಸಿಕವಾಗಿ ಜರ್ಜರಿತರಾಗಿದ್ದು, ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಡೆತ್ ನೋಟ್ ಬರೆದಿಟ್ಟು ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡಿದ್ದಾರೆ.
ಡ್ರಗ್ಸ್ ಕೂಪದಿಂದ ಮಗಳನ್ನು ರಕ್ಷಿಸಿ; ವಿಶ್ವ ಹಿಂದೂ ಪರಿಷತ್ ಗೆ ಪತ್ರ ಬರೆದ ಮಹಿಳೆ
ನನಗೆ ಮಾತ್ರೆ ಸೇವಿಸಿ ಸೇವಿಸಿ ಜೀವನವೇ ಸಾಕು ಎನಿಸಿ ಬಿಟ್ಟಿದೆ. ಇಲ್ಲಿಯವರೆಗೂ ಬರೋಬ್ಬರಿ 25 ಸಾವಿರದಷ್ಟು ಮಾತ್ರೆಗಳನ್ನು ಸೇವಿಸಿದ್ದೇನೆ. ನನ್ನ ಕುಟುಂಬಸ್ಥರು ತುಂಬಾ ಒಳ್ಳೆಯವರು. ಹೀಗಾಗಿ ಅವರಿಗೆಲ್ಲ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.
ಇವರು ಕಳೆದ ನಾಲ್ಕು ವರ್ಷಗಳಿಂದ ಯಲಹಂಕದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಶಿವಮೊಗ್ಗದ ಸರ್ಕಾರಿ ಕಾಲೇಜೊಂದರಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು. ಮೃತ ಅಧಿಕಾರಿಗೆ ಓರ್ವ ಪುತ್ರ ಇದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.