ಸರ್ಕಾರಿ ನೌಕರಿಯಲ್ಲಿರುವ ವ್ಯಕ್ತಿ ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ ಅನುಕಂಪದ ಆಧಾರದ ಮೇಲೆ ಆ ವ್ಯಕ್ತಿಯ ಕುಟುಂಬಸ್ಥರಿಗೆ ಉದ್ಯೋಗ ನೀಡಲಾಗುತ್ತದೆ. ಈ ರೀತಿ ಉದ್ಯೋಗ ಪಡೆಯುವುದರ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಸರ್ಕಾರಿ ಉದ್ಯೋಗಿ ಮರಣ ಹೊಂದಿದ ಸಂದರ್ಭದಲ್ಲಿ ಅವರ ಕುಟುಂಬದ ಓರ್ವ ವ್ಯಕ್ತಿಗೆ ಅನುಕಂಪದ ಆಧಾರದ ಮೇಲೆ ನೀಡುವ ಉದ್ಯೋಗ, ಸ್ಥಾಪಿತವಾದ ಹಕ್ಕಲ್ಲ ಹಾಗೂ ಈ ರೀತಿ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದ ಸಂದರ್ಭದಲ್ಲಿ ಅಥವಾ ಆ ಹುದ್ದೆಗೆ ಅರ್ಹತೆಯನ್ನು ಹೊಂದಲು ವಿಫಲವಾದ ವೇಳೆ ಅಂತವರನ್ನು ಕೆಲಸದಿಂದ ತೆಗೆದು ಹಾಕಬಹುದು ಎಂದು ಅಭಿಪ್ರಾಯ ಪಟ್ಟಿದೆ.
ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎ.ಎಸ್. ಬೋಪಣ್ಣ ಅವರನ್ನು ಒಳಗೊಂಡ ನ್ಯಾಯಪೀಠ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಕರಣ ಒಂದರಲ್ಲಿ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದಿದ್ದ ವ್ಯಕ್ತಿಯನ್ನು ತನ್ನ ಸಾಮರ್ಥ್ಯ ತೋರಿಸಲು ವಿಫಲರಾದ ಕಾರಣಕ್ಕೆ ಕೆಲಸದಿಂದ ತೆಗೆದು ಹಾಕಿದ್ದ ಉತ್ತರ ಪ್ರದೇಶ ಸರ್ಕಾರದ ತೀರ್ಮಾನವನ್ನು ಎತ್ತಿ ಹಿಡಿದಿದೆ.