ಅನುದಾನಿತ ಶಿಕ್ಷಣ ಸಂಸ್ಥೆ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆರೋಗ್ಯ ವಿಮೆ ಒದಗಿಸಲು ಚಿಂತನೆ ನಡೆಸಲಾಗಿದೆ.
ಮಂಗಳವಾರದಂದು ವಿಧಾನಪರಿಷತ್ ನಲ್ಲಿ ಸದಸ್ಯರು ಪಕ್ಷಭೇದ ಮರೆತು ಸಾರ್ವಜನಿಕ ಮಹತ್ವದಡಿ ವಿಷಯ ಪ್ರಸ್ತಾಪಿಸಿದ ವೇಳೆ ಈ ವಿಷಯ ತಿಳಿಸಲಾಗಿದೆ.
ಇದಕ್ಕೆ ಉತ್ತರಿಸಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ನಿಯಮಗಳಲ್ಲಿ ಸೂಕ್ತ ತಿದ್ದುಪಡಿ ಮಾಡುವ ಮೂಲಕ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.