alex Certify ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯಿಂದಲೇ ಪತಿಗೆ ಧಮ್ಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯಿಂದಲೇ ಪತಿಗೆ ಧಮ್ಕಿ

ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂಬ ಶಂಕೆ ಹಿನ್ನಲೆಯಲ್ಲಿ ಪತಿ ಆಕೆಯನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಜನರನ್ನು ಕರೆದುಕೊಂಡು ಬಂದ ಪತ್ನಿ, ಪತಿಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ವ್ಯಕ್ತಿಗೆ 2006 ರಲ್ಲಿ ಮಹಿಳೆಯೊಂದಿಗೆ ವಿವಾಹವಾಗಿದ್ದು, ಜೀವನೋಪಾಯಕ್ಕಾಗಿ ದಂಪತಿ ಬೆಂಗಳೂರಿಗೆ ತೆರಳಿ ನೆಲೆಸಿದ್ದರು. ಪತಿ ಎಳನೀರು ವ್ಯಾಪಾರ ಮಾಡಿಕೊಂಡಿದ್ದರೆ ಪತ್ನಿ ಗಾರ್ಮೆಂಟ್‌ ಫ್ಯಾಕ್ಟರಿ ಕೆಲಸಕ್ಕೆ ಹೋಗುತ್ತಿದ್ದಳು.

ದಂಪತಿಗೆ ಇಬ್ಬರು ಮಕ್ಕಳಿದ್ದು, ಇದರ ಮಧ್ಯೆ ಪತ್ನಿ, ಪರಪುರುಷರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳೆನ್ನಲಾಗಿದ್ದು, ಇದನ್ನು ಪತಿ ಪ್ರಶ್ನಿಸಿದ್ದಾನೆ. ಈ ವೇಳೆ ಮೂರ್ನಾಲ್ಕು ಜನರನ್ನು ಕರೆದುಕೊಂಡು ಬಂದ ಪತಿಗೆ ಬೆದರಿಕೆ ಹಾಕಿದ್ದಾಳೆ.

ಇದರಿಂದ ಭಯಗೊಂಡ ಪತಿ ಭದ್ರಾವತಿಗೆ ಬಂದು ನೆಲೆಸಿದ್ದು, ಇದರ ಮಧ್ಯೆ ಮಹಿಳೆ ತನ್ನ ಅನೈತಿಕ ಸಂಬಂಧಕ್ಕೆ ಮಕ್ಕಳು ಅಡ್ಡಿಯಾಗುತ್ತಾರೆಂಬ ಕಾರಣಕ್ಕೆ ಅವರನ್ನು ರೂಮಿನಲ್ಲಿ ಕೂಡಿ ಹಾಕಿ ಥಳಿಸಿದ್ದಳೆನ್ನಲಾಗಿದೆ.

ಇದೀಗ ಪತಿ, ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈಗ ಮಹಿಳೆ ಸೇರಿದಂತೆ 7 ಜನರ ವಿರುದ್ದ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...