ರಾಜ್ಯ ಸರ್ಕಾರ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ತಾನು ನೀಡಿದ್ದ ‘ಗ್ಯಾರಂಟಿ’ ಯೋಜನೆಗಳ ಪೈಕಿ ಒಂದೊಂದನ್ನೇ ಅನುಷ್ಠಾನಗೊಳಿಸುತ್ತಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ.
ಇದರ ಮಧ್ಯೆ ‘ಅನ್ನಭಾಗ್ಯ’ ಯೋಜನೆಯಡಿ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಬದಲಿಗೆ ತಲಾ 170 ರೂಪಾಯಿ ನಗದು ನೀಡಲು ತೀರ್ಮಾನಿಸಲಾಗಿದ್ದು, ಈ ಪ್ರಕ್ರಿಯೆ ಜುಲೈ 1ರಿಂದ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಈ ಯೋಜನೆ ಜುಲೈ 10ರ ನಂತರ ಆರಂಭವಾಗಲಿದೆ ಎಂದು ತಿಳಿದುಬಂದಿದೆ.
ಶನಿವಾರದಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನ್ನಭಾಗ್ಯದ ಹಣ ಪಾವತಿಯನ್ನು ಜುಲೈ 10ರ ನಂತರ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ. ಜುಲೈ ತಿಂಗಳ ಮೊತ್ತವನ್ನು ಇದೇ ತಿಂಗಳಿನಲ್ಲಿಯೇ ಪಡಿತರ ಕಾರ್ಡ್ ದಾರರ ಬ್ಯಾಂಕ್ ಖಾತೆಗಳಿಗೆ ಡಿ ಬಿ ಟಿ ಮೂಲಕ ಪಾವತಿಸಲು ಸಿದ್ಧತೆ ನಡೆದಿದೆ ಎಂದು ತಿಳಿದು ಬಂದಿದೆ.