ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಮೂರನೇ ಹಂತದ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದ್ದು, ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೆ ಚಿಂತನೆ ನಡೆಸಲಾಗುತ್ತಿದೆ.
ನಾಳೆಯಿಂದ ಅನ್ ಲಾಕ್ 3.0 ಜಾರಿ ಹಾಗೂ ಅನ್ ಲಾಕ್ 4.0 ಕುರಿತು ಹೊಸ ನಿಯಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಆಧಿಕಾರಿಗಳ ಸಭೆ ನಡೆಯುತ್ತಿದ್ದು, ಇಂದು ಸಂಜೆಯೊಳಗೆ ನಿರ್ಧಾರ ಪ್ರಕಟವಾಗಲಿದೆ.
BIG NEWS: ಪಿಎಸ್ಐ ವಿರುದ್ಧವೇ ದಾಖಲಾಯ್ತು FIR
ಅನ್ ಲಾಕ್ 3.0 ದಲ್ಲಿ ಥಿಯೇಟರ್, ಮಲ್ಟಿಫ್ಲೆಕ್ಸ್, ಪಬ್, ಜಿಮ್ ಗಳನ್ನು ತೆರೆಯಲು ಹಾಗೂ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಅಲ್ಲದೇ ನೈಟ್ ಕರ್ಫ್ಯೂ ಸಂಪೂರ್ಣ ತೆರವಾಗುವ ಸಾಧ್ಯತೆ ದಟ್ಟವಾಗಿದೆ. ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಮುಂಜಾಗೃತಾ ಕ್ರಮಗಳು ಹಾಗೂ ಅನ್ ಲಾಕ್ 4.0 ಹೊಸ ನಿಯಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಹೊಸ ನಿಯಮ ಜಾರಿ ಕುರಿತು ಇಂದು ಸಂಜೆ ನಿರ್ಧಾರ ಪ್ರಕಟವಾಗಲಿದೆ ಎನ್ನಲಾಗುತ್ತಿದೆ.